Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 14,306 ಕೋವಿಡ್ ಪ್ರಕರಣ ಪತ್ತೆ, 443 ಮಂದಿ ಸಾವು

11:53 AM Oct 25, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,306 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 443 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,41,89,774ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಅಕ್ಟೋಬರ್ 25) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,54,712ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 18,762 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ 4,899 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,67,695ಕ್ಕೆ ತಲುಪಿದೆ ಎಂದು ಅಂಕಿಅಂಶ ಹೇಳಿದೆ.

ದೇಶಾದ್ಯಂತ ಕೋವಿಡ್ ಸೋಂಕು ಚೇತರಿಕೆ ಪ್ರಮಾಣ ಶೇ.98.18ರಷ್ಟಿದ್ದು, ಇದು 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ವಿವರಿಸಿದೆ. ದಿನದ ಪಾಸಿಟಿವಿಟಿ ದರ ಶೇ.1.43ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.24ರಷ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next