Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

12:58 PM Oct 16, 2021 | Team Udayavani |

ನವದೆಹಲಿ;ಕಳೆದ 24ಗಂಟೆಗಳಲ್ಲಿ ಭಾರತದಲ್ಲಿ 15,981 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಶುಕ್ರವಾರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸೋಂಕು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಅಕ್ಟೋಬರ್ 16) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಇದು 14ನೇ ಬಾರಿಯ ಏರಿಕೆ; ಮುಂಬೈನಲ್ಲಿ ಪೆಟ್ರೋಲ್‌ ಲೀಟರ್‌ಗೆ 111.09 ರೂ.

ಕೋವಿಡ್ ಸೋಂಕಿನಿಂದ 166 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಈವರೆಗೆ ಕೋವಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,51,980ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,01,632ಕ್ಕೆ ಇಳಿಕೆಯಾಗಿದೆ ಎಂದು ವರದಿ ಹೇಳಿದೆ.

ಭಾರತದಲ್ಲಿ ಚೇತರಿಕೆ ಪ್ರಮಾಣ ದಾಖಲೆಯ 98.07ಕ್ಕೆ ತಲುಪಿದೆ. ಸಕ್ರಿಯ ಕೋವಿಡ್ ಪ್ರಕರಣಗಳು 2,046ರಷ್ಟು ಕಡಿಮೆಯಾಗಿದ್ದು, ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,33,99,961ಕ್ಕೆ ತಲುಪಿದೆ.

ಕಳೆದ 24ಗಂಟೆಗಳಲ್ಲಿ 9,23,003 ಮಂದಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ದೇಶಾದ್ಯಂತ 58,98,35,258 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

More
Next