Advertisement

ಭಾರತದಲ್ಲಿ 24ಗಂಟೆಯಲ್ಲಿ 1,968 ಕೋವಿಡ್ ಸೋಂಕು ಪ್ರಕರಣ ಪತ್ತೆ, ಸಕ್ರಿಯ ಕೇಸ್ ಭಾರೀ ಇಳಿಕೆ

11:16 AM Oct 04, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1,968 ಕೋವಿಡ್ ಸೋಂಕು ಪ್ರಕರಣ ಮಂಗಳವಾರ (ಅಕ್ಟೋಬರ್ 04) ಪತ್ತೆಯಾಗಿದ್ದು, ಇದು 133 ದಿನಗಳ ಕನಿಷ್ಠದ್ದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಜಮ್ಮು-ಕಾಶ್ಮೀರ: ಕಾರಾಗೃಹ ಅಧಿಕಾರಿ ಶವವಾಗಿ ಪತ್ತೆ, ಹೊಣೆ ಹೊತ್ತ ಭಯೋತ್ಪಾದಕ ಸಂಘಟನೆ

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 34,598ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ 1,528 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಸಚಿವಾಲಯ ವಿವರಿಸಿದೆ.

24ಗಂಟೆಯಲ್ಲಿ ಕೋವಿಡ್ ಸೋಂಕಿನಿಂದ 15 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,716ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 3,481 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಾದ್ಯಂತ ಕೋವಿಡ್ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,40,36,152ಕ್ಕೆ ತಲುಪಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.94ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.1.29ರಷ್ಟಿದೆ ಎಂದು ಅಂಕಿಅಂಶ ವಿವರಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next