Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.59 ಲಕ್ಷ ಕೋವಿಡ್ ಪ್ರಕರಣ ಪತ್ತೆ, 4,200 ಮಂದಿ ಸಾವು

09:43 AM May 21, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 2.59 ಲಕ್ಷ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 4,200 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಮೇ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಟ್ವಿಟ್ಟರ್ ‘ವೇರಿಫಿಕೇಶನ್ ಬ್ಯಾಡ್ಜ್’ ಪುನರಾರಂಭ; ಯಾರೆಲ್ಲಾ ಅರ್ಹರು ? ಮಾರ್ಗಸೂಚಿಗಳೇನು ?

ದೇಶದಲ್ಲಿ ಐದು ರಾಜ್ಯಗಳಲ್ಲಿ ಅಧಿಕ ಕೋವಿಡ್ ಸೋಂಕು ಪ್ರಕರಣ ವರದಿಯಾಗಿದೆ. ಇದರಲ್ಲಿ ತಮಿಳುನಾಡಿನಲ್ಲಿ 35,578 ಪ್ರಕರಣ, ಕೇರಳದಲ್ಲಿ 30,491, ಮಹಾರಾಷ್ಟ್ರದಲ್ಲಿ 29,911, ಕರ್ನಾಟಕದಲ್ಲಿ 28,869 ಹಾಗೂ ಆಂಧ್ರಪ್ರದೇಶದಲ್ಲಿ 22,160 ಪ್ರಕರಣ ಪತ್ತೆಯಾಗಿದೆ.

ಈ ಐದು ರಾಜ್ಯಗಳಿಂದ ಶೇ.56.81ರಷ್ಟಜ ಹೊಸ ಕೋವಿಡ್ 19 ಪ್ರಕರಣಗಳು ವರದಿಯಾಗಿದೆ. ತಮಿಳುನಾಡು ರಾಜ್ಯವೊಂದರಲ್ಲಿಯೇ ಶೇ.13.71ರಷ್ಟು ಪ್ರಕರಣ ವರದಿಯಾಗಿದೆ. ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 4,209 ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದು, ಮಹಾರಾಷ್ಟ್ರದಲ್ಲಿ 984, ಕರ್ನಾಟಕದಲ್ಲಿ 548 ಸಾವಿನ ಪ್ರಕರಣ ವರದಿಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ದೇಶದಲ್ಲಿ 2,59,591 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಅಲ್ಲದೇ 3,57,295 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಟ್ಟು 30,27,925 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 2,91,331ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next