Advertisement

ಭಾರತದಲ್ಲಿ 24 ಗಂಟೆಯಲ್ಲಿ 21,566 ಕೋವಿಡ್ ಸೋಂಕು ಪ್ರಕರಣ ಪತ್ತೆ, 45 ಮಂದಿ ಸಾವು

10:33 AM Jul 21, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 21,566 ಕೋವಿಡ್ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 45 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಈವರೆಗೆ 5,25,870ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಜುಲೈ 21) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ: ಕೈ ನಾಯಕರಿಗೆ ಬಿಎಸ್ ವೈ ಟಾಂಗ್

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,48,882ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,31,50,434ಕ್ಕೆ ಹೆಚ್ಚಳವಾಗಿದೆ.

24ಗಂಟೆಯಲ್ಲಿ 3,227 ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಸೋಂಕು ಪ್ರಕರಣದ ಚೇತರಿಕೆ ಪ್ರಮಾಣ 98.46ರಷ್ಟಿದೆ. ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ 200.91 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿನ ಪ್ರತಿದಿನದ ಪಾಸಿಟಿವಿಟಿ ದರ ಶೇ.4.25ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.4.51ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಅಂಕಿಅಂಶದಲ್ಲಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next