ನವದೆಹಲಿ:ಭಾರೀ ಆತಂಕ ಹುಟ್ಟಿಸಿದ್ದ ಕೋವಿಡ್ ಅಲೆ ಇದೀಗ ಭಾರತದಲ್ಲಿ ದಿನದಿಂದ ದಿನಕ್ಕೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 22,270 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದೆ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಫೆ.19) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ದಲಿತ ಕುಟುಂಬಕ್ಕೆ, ಕೋರ್ಟಿಗೆ ವಂಚನೆ: ವಕೀಲನಿಗೆ ಜೀವಾವಧಿ ಶಿಕ್ಷೆ
ಕೋವಿಡ್ 19 ಸೋಂಕಿನಿಂದ ಒಂದೇ ದಿನದಲ್ಲಿ 325 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,11,230ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
24ಗಂಟೆಯಲ್ಲಿ 38,353 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಭಾರತದಾದ್ಯಂತ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2,53,739ಕ್ಕೆ ತಲುಪಿದೆ. ಒಂದೇ ದಿನದಲ್ಲಿ 60,298 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4,20,37,536ಕ್ಕೆ ತಲುಪಿದೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.21ಕ್ಕೆ ತಲುಪಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.1.80ಕ್ಕೆ ಇಳಿಕೆಯಾಗಿದೆ. ವಾರದ ಪಾಸಿಟಿವಿಟಿ ದರ ಶೇ.2.50ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.