Advertisement

ಭಾರತದಲ್ಲಿ 24 ಗಂಟೆಯಲ್ಲಿ 2,503 ಕೋವಿಡ್ ಪ್ರಕರಣ ಪತ್ತೆ, ಸಾವಿನ ಪ್ರಮಾಣ ಭಾರೀ ಇಳಿಕೆ

10:42 AM Mar 14, 2022 | Team Udayavani |

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಕೋವಿಡ್ 19 ಸೋಂಕು ಪ್ರಕರಣ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 2,503 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಅಲ್ಲದೇ 27 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮಾರ್ಚ್ 14) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ನಿಂತಿದ್ದ ಲಾರಿಗೆ ಟೆಂಪೊ ಟ್ರಾವೆಲರ್ ಢಿಕ್ಕಿ: ಇಬ್ಬರು ಸಾವು, ಹತ್ತು ಜನರಿಗೆ ಗಾಯ

ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,15,877ಕ್ಕೆ ಏರಿಕೆಯಾಗಿದೆ. ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 36,168ಕ್ಕೆ ಇಳಿಕೆಯಾಗಿದೆ.

ಕಳೆದ 24ಗಂಟೆಯಲ್ಲಿ 1901 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಅಲ್ಲದೇ 4,377 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಇದರೊಂದಿಗೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,24,41,449ಕ್ಕೆ ತಲುಪಿದೆ.

ದೇಶದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.72ರಷ್ಟಿದ್ದು, ಭಾರತದಲ್ಲಿನ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 180.19 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯದ ಅಂಕಿ ಅಂಶ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next