ನವದೆಹಲಿ: ಭಾರತದಲ್ಲಿ ಸತತವಾಗಿ ಕೋವಿಡ್ 19 ಪ್ರಕರಣ ಭಾರೀ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 25, 920 ಕೋವಿಡ್ ಪ್ರಕರಣ ವರದಿಯಾಗಿದೆ. 492 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ಶುಕ್ರವಾರ (ಫೆ.18) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ತ್ರಿವಳಿ ತಲಾಖ್ ನಿಷೇಧ-ಮುಸ್ಲಿಮ್ ಸಹೋದರಿಯರಿಂದ ಆಶೀರ್ವಾದ ಸ್ವೀಕರಿಸುತ್ತಿದ್ದೇನೆ; ಮೋದಿ
ಒಂದೇ ದಿನದಲ್ಲಿ ದೇಶದಲ್ಲಿ 40,826 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ದೇಶಾದ್ಯಂತ ಒಟ್ಟು ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,92,092ಕ್ಕೆ ತಲುಪಿದೆ ಎಂದು ಹೇಳಿದೆ.
24ಗಂಟೆಯಲ್ಲಿ 492 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,10,905ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಒಂದೇ ದಿನದಲ್ಲಿ ಭಾರತದಾದ್ಯಂತ ಕೋವಿಡ್ 19 ಸೋಂಕಿನಿಂದ 66,254 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,19,77,238ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.12ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.07ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.2.76ರಷ್ಟಿರುವುದಾಗಿ ಸಚಿವಾಲಯ ಮಾಹಿತಿ ನೀಡಿದೆ.