Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ಪ್ರಕರಣ ಪತ್ತೆ, 34,469 ಮಂದಿ ಗುಣಮುಖ

10:29 AM Sep 21, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 26,115 ನೂತನ ಕೋವಿಡ್ ಪ್ರಕರಣ ಪ್ತೆಯಾಗಿದ್ದು, 252 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಸೆಪ್ಟೆಂಬರ್ 21) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಕಳೆದ 24ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 252 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಕೋವಿಡ್ ನಿಂದ ಒಟ್ಟು 4,45,385 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಹಮ್ಮಿಕೊಂಡ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 81.85 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,09,575ರಷ್ಟಿದ್ದು, ಇದು ಕಳೆದ 184 ದಿನಗಳ ನಂತರದ ಅತೀ ಕನಿಷ್ಠ ಪ್ರಮಾಣದ್ದಾಗಿದೆ. ಕಳೆದ 24 ಗಂಟೆಗಳಲ್ಲಿ 26,115 ಕೋವಿಡ್ ಪ್ರಕರಣ ವರದಿಯಾಗಿದೆ.

2020ರ ಮಾರ್ಚ್ ನಂತರ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.75ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 34,469 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ದೇಶಾದ್ಯಂತ ಒಟ್ಟು 3,27,49,574 ಮಂದಿ ಚೇತರಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next