Advertisement

ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ನಾಗಾಲೋಟ; ಒಮಿಕ್ರಾನ್ 5,753ಕ್ಕೆ ಏರಿಕೆ

10:20 AM Jan 14, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,64,202 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 315 ಮಂದಿ ಸಾವನ್ನಪ್ಪಿದ್ದಾರೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,85,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜನವರಿ 14) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಬೈರಾಗಿ ಮಾತು ಮತ್ತು ಶಕ್ತಿಧಾಮದ ಕನಸು…: ಶಿವಣ್ಣ ಜೊತೆ ಚಿಟ್‌ಚಾಟ್‌

24ಗಂಟೆಯ ಅವಧಿಯಲ್ಲಿ 1,54,542 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ದೇಶಾದ್ಯಂತ ಈವರೆಗೆ ಒಟ್ಟು 12,72,073 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

ಒಂದೇ ದಿನದಲ್ಲಿ ಕೋವಿಡ್ ಸೋಂಕಿನಿಂದ 1,09,345 ಮಂದಿ ಗುಣಮುಖರಾಗಿದ್ದು, ಭಾರತದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 3,48,24,706ಕ್ಕೆ ತಲುಪಿದೆ.

24ಗಂಟೆಯಲ್ಲಿ 256 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 5,753ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement

ಗುಜರಾತ್, ತೆಲಂಗಾಣ, ಆಂಧ್ರಪ್ರದೇಶ, ಹರ್ಯಾಣ, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಒಡಿಶಾ, ಉತ್ತರಾಖಂಡ್, ಚಂಡೀಗಢ್, ಜಮ್ಮು-ಕಾಶ್ಮೀರ, ಉತ್ತರಪ್ರದೇಶ, ಗೋವಾ, ಹಿಮಾಚಲ್ ಪ್ರದೇಶ, ಕರ್ನಾಟಕ, ಲಡಾಖ್, ಮಣಿಪುರ್, ತಮಿಳುನಾಡು, ಪಂಜಾಬ್ ಸೇರಿದಂತೆ ಒಟ್ಟು 27 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next