ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 2,706 ಕೋವಿಡ್ 19 ಸೋಂಕು ಪ್ರಕರಣ ದೃಢಪಟ್ಟಿದ್ದು, ದೇಶದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,55,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಮೇ 30) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಿಧು ಮೂಸೆವಾಲಾ ಹತ್ಯೆಯ ಹೊಣೆಹೊತ್ತ ಕೆನಡಾ ಮೂಲದ ಗ್ಯಾಂಗ್ ಸ್ಟರ್, ಯಾರೀತ ಗೋಲ್ಡಿ?
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 17,698ಕ್ಕೆ ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 25 ಮಂದಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಭಾರತದಲ್ಲಿನ ಕೋವಿಡ್ ಪ್ರಕರಣಗಳ ಸಾವಿನ ಸಂಖ್ಯೆ 5,24,611ಕ್ಕೆ ಏರಿಕೆಯಾಗಿದೆ.
24ಗಂಟೆಯಲ್ಲಿ 2,070 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,26,13,440ಕ್ಕೆ ತಲುಪಿದೆ ಎಂದು ಸಚಿವಾಲಯದ ಅಂಕಿಅಂಶ ತಿಳಿಸಿದೆ.
24ಗಂಟೆಯಲ್ಲಿ 611 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿನ ಕೋವಿಡ್ ಚೇತರಿಕೆ ದರ ಶೇ.98.74ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.0.97ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.58ರಷ್ಟಿದೆ ಎಂದು ವರದಿ ಹೇಳಿದೆ.