ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 27,176 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 284 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ (ಸೆಪ್ಟೆಂಬರ್ 15) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಾಗಿದ್ದಾರೆ: ಇಕ್ಬಾಲ್ ಸಿಂಗ್
ಮಂಗಳವಾರ ವರದಿಯಾದ ಪ್ರಕರಣಕ್ಕಿಂತ ಶೇ.7ರಷ್ಟು ಕಳೆದ 24ಗಂಟೆಗಳಲ್ಲಿ ಹೆಚ್ಚಳವಾಗಿದೆ ಎಂದು ವರದಿ ಹೇಳಿದೆ. ಕಳೆದ 24ಗಂಟೆಗಳಲ್ಲಿ 284 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಒಟ್ಟು ಈವರೆಗೆ 4,43,497 ಮಂದಿ ಸಾವನ್ನಪ್ಪಿದ್ದಾರೆ.
ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,33,16,755ಕ್ಕೆ ತಲುಪಿದೆ. ಕೇರಳ ರಾಜ್ಯದಲ್ಲಿ ಗರಿಷ್ಠ ಪ್ರಮಾಣದ 15,876 ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 3,530, ತಮಿಳುನಾಡಿನಲ್ಲಿ 1,591, ಮಿಜೋರಾಂನಲ್ಲಿ 1,185 ಹಾಗೂ ಆಂಧ್ರಪ್ರದೇಶದಲ್ಲಿ 1,125 ಪ್ರಕರಣ ವರದಿಯಾಗಿದೆ.
ದೇಶದ ಐದು ರಾಜ್ಯಗಳಿಂದ ಶೇ.85.76ರಷ್ಟು ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ ಕೇರಳ ರಾಜ್ಯವೊಂದರಲ್ಲಿಯೇ ಶೇ.58.42ರಷ್ಟು ಕೋವಿಡ್ ಪ್ರಕರಣ ವರದಿಯಾಗಿದೆ. ಕಳೆದ 24ಗಂಟೆಗಳಲ್ಲಿ ಕೇರಳದಲ್ಲಿ 129 ಮಂದಿ ಸಾವನ್ನಪ್ಪಿದ್ದು, ಮಹಾರಾಷ್ಟ್ರದಲ್ಲಿ 52 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.