ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆ ಅವಧೀಯಲ್ಲಿ 27,553 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಇದು ಶನಿವಾರ ವರದಿಯಾದ ಪ್ರಕರಣಗಳಿಗಿಂತ ಶೇ.21 ರಷ್ಟು ಹೆಚ್ಚಿದೆ.
ಈ ಸಮಯದಲ್ಲಿ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರ ದಾಟಿದೆ. 284 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಇದರಿಂದ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ 4,81,770ಕ್ಕೆ ಏರಿಕೆಯಾಗಿದೆ.
ದೇಶದ ರಿಕವರಿ ದರ ಸದ್ಯ 98.27 ಇದ್ದು, ಕಳೆದ 24 ಗಂಟೆ ಅವಧಿಯಲ್ಲಿ 9,249 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,22,801 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆ ಅವಧಿಯಲ್ಲಿ ಸಕ್ರಿಯ ಪ್ರಕರಣಗಳಲ್ಲಿ 18,020 ಪ್ರಕರಣಗಳು ಹೆಚ್ಚಾಗಿದೆ.
ಇದನ್ನೂ ಓದಿ:ಒಮಿಕ್ರಾನ್ ವೇಗ ಪಡೆದಿದೆ… ತಾತ್ಕಾಲಿಕ ಆಸ್ಪತ್ರೆಗಳನ್ನು ನಿರ್ಮಿಸಿ: ಕೇಂದ್ರದ ಎಚ್ಚರಿಕೆ
ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಪತ್ತೆಯಾಗುತ್ತಿದ್ದು, ಆ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9,170 ಪ್ರಕರಣಗಳು ಪತ್ತೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ 4,512 ಪ್ರಕರಣಗಳು, ದೆಹಲಿಯಲ್ಲಿ 2716 ಪ್ರಕರಣಗಳು ಮತ್ತು ಕೇರಳದಲ್ಲಿ 2,435 ಪ್ರಕರಗಳು ಮತ್ತು ತಮಿಳುನಾಡು ರಾಜ್ಯದಲ್ಲಿ 1,489 ಪ್ರಕರಣಗಳು ಪತ್ತೆಯಾಗಿದೆ.
ದೇಶದ ಒಟ್ಟು ಪ್ರಕರಣಗಳ ಪೈಕಿ ಶೇ.75ರಷ್ಟು ಪ್ರಕರಣಗಳು ಈ ಐದು ರಾಜ್ಯಗಳಲ್ಲಿ ಪತ್ತಯಾಗಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಶೇ.33.28 ಪ್ರಕರಣಗಳು ದೃಢವಾಗಿದೆ.