ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 3 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 439 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಜನವರಿ 24) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ:ತಮ್ಮ ಮದುವೆಯನ್ನೇ ರದ್ದು ಮಾಡಿದ ನ್ಯೂಜಿಲೆಂಡ್ ಪ್ರಧಾನಿ!
ದೇಶದ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 22,49,335ಕ್ಕೆ ಏರಿಕೆಯಾಗಿದೆ. ಅಲ್ಲದೇ ಭಾರತದಲ್ಲಿ ಈವರೆಗೆ 71.69 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 24 ಗಂಟೆಯಲ್ಲಿ ದಾಖಲೆ ಪ್ರಮಾಣದಲ್ಲಿ 14,74,753 ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ದಿನಂಪ್ರತಿಯ ಪಾಸಿಟಿವಿಟಿ ದರ ಶೇ.20.75ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.17.03ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 2,43,495 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ.
ದೇಶಾದ್ಯಂತ ಈವರೆಗೆ 162.26 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಕೋವಿಡ್ ನ ನೂತನ ರೂಪಾಂತರ ತಳಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 10,000ಕ್ಕೆ ದಾಟಿದೆ ಎಂದು ವರದಿ ಹೇಳಿದೆ.