ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 33,376 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 308 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಸೆಪ್ಟೆಂಬರ್ 11) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಗಣೇಶೋತ್ಸವಕ್ಕೆ ನಿರ್ಬಂಧ: ಮಹಾರಾಷ್ಟ್ರದಲ್ಲಿರುವುದು ಹಿಂದೂ ವಿರೋಧಿ ಸರ್ಕಾರ: ಸಚಿವ ರಾಣೆ
ದೇಶದಲ್ಲಿ ಒಟ್ಟು 3,32,08,330 ಕೋವಿಡ್ ಪ್ರಕರಣಗಳಿದ್ದು, ಕೋವಿಡ್ ಸೋಂಕಿನಿಂದ ಈವರೆಗೆ ಸಾವನ್ನಪ್ಪಿರುವವರ ಸಂಖ್ಯೆ 4,42,317ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ಹೇಳಿದೆ.
ಕಳೆದ 24ಗಂಟೆಗಳಲ್ಲಿ 32,198 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,23,74,497ಕ್ಕೆ ಏರಿಕೆಯಾಗಿದೆ. ಪ್ರಸ್ತುತ 3,19,516 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ಶೇ.97.49ರಷ್ಟು ಚೇತರಿಕೆ ಪ್ರಮಾಣ ಇದ್ದು, ವಾರದ ಪಾಸಿಟಿವಿಟಿ ದರ ಶೇ.2.26ಕ್ಕೆ ಇಳಿಕೆಯಾಗಿದೆ. ಇದು ಕಳೆದ 78 ದಿನಗಳಲ್ಲಿಯೇ ಕನಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ತಿಳಿಸಿದೆ.