ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 33,750 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 123 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,81,893ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜನವರಿ 03) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಮ್ರಾನ್ ಖಾನ್ ಮಾಜಿ ಪತ್ನಿ ಕಾರಿನ ಮೇಲೆ ಗುಂಡಿನ ದಾಳಿ: ‘ಇದೇನಾ ಹೊಸ ಪಾಕಿಸ್ಥಾನ’ ಎಂದ ರೆಹಮ್
ಒಂದೇ ದಿನದಲ್ಲಿ ದೇಶದಲ್ಲಿ 22,781 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಲ್ಲದೇ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 1,45,582ಕ್ಕೆ ಹೆಚ್ಚಳವಾಗಿದೆ.
24ಗಂಟೆಯಲ್ಲಿ ದೇಶಾದ್ಯಂತ ಕೋವಿಡ್ ಸೋಂಕಿನಿಂದ 10,846 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಈವರೆಗೆ ಒಟ್ಟು ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,42,95,407ಕ್ಕೆ ಏರಿಕೆಯಾಗಿದೆ.
ಕೋವಿಡ್ ಸಂಖ್ಯೆ ಹೆಚ್ಚಳದ ನಡುವೆಯೇ ದೇಶದಲ್ಲಿ 24ಗಂಟೆಯಲ್ಲಿ 175 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 1,700ಕ್ಕೆ ಏರಿಕೆಯಾಗಿದ್ದು, 639 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.