Advertisement

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,457 ಹೊಸ ಕೋವಿಡ್ ಪ್ರಕರಣ ಪತ್ತೆ, 375 ಮಂದಿ ಸಾವು

10:53 AM Aug 21, 2021 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 34,457 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 375 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಆಗಸ್ಟ್ 21) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಮಂಗಳೂರು: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವು!

ಕಳೆದ 24ಗಂಟೆಯಲ್ಲಿ ದೇಶದಲ್ಲಿ 36,357 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಈವರೆಗೆ 3,15,97,982 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕೋವಿಡ್ ನಿಂದ 24 ಗಂಟೆಯಲ್ಲಿ 375 ಮಂದಿ ಸಾವನ್ನಪ್ಪಿದ್ದು, ಒಟ್ಟು ಈವರೆಗೆ ದೇಶದಲ್ಲಿ 4,33,944 ಮಂದಿ ಸಾವನ್ನಪ್ಪಿದ್ದಾರೆ.

ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,61,340ಕ್ಕೆ ಇಳಿಕೆಯಾಗಿದೆ. ಇದು ಕಳೆದ 151 ದಿನಗಳ ಕನಿಷ್ಠ ಪ್ರಮಾಣದ್ದಾಗಿದೆ. 2020ರ ಮಾರ್ಚ್ ಬಳಿಕ ದೇಶದಲ್ಲಿ ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ.97.54ಕ್ಕೆ ಏರಿಕೆಯಾಗಿದೆ.

ದಿನದ ಪಾಸಿಟಿವಿಟಿ ದರ ಶೇ.2ರಷ್ಟಿದೆ, ವಾರದ ಪಾಸಿಟಿವಿಟಿ ದರ ಶೇ.1.98ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ. ದೇಶದಲ್ಲಿ ಲಸಿಕೆ ಅಭಿಯಾನ ಚುರುಕುಗೊಳಿಸಲಾಗಿದೆ ಎಂದು ವರದಿ ಹೇಳಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next