ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 35,662 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 281 ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,34,17,390 ಕೋಟಿಗೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ತಿಗರಪಾಳ್ಯ ಘಟನೆ: 5 ದಿನ ಶವಗಳ ಮುಂದೆ ಕಣ್ಣೀರಿಟ್ಟು ಬದುಕಿದ ಎರಡೂವರೆ ವರ್ಷದ ಪ್ರೇಕ್ಷಾ!
ಕಳೆದ 24ಗಂಟೆಗಳಲ್ಲಿ 281 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,44,529ಕ್ಕೆ ಏರಿಕೆಯಾಗಿದೆ. 24ಗಂಟೆಯಲ್ಲಿ 33,798 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿ ಈವರೆಗೆ ಕೋವಿಡ್ ನಿಂದ 3,26,32,222 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,40,639ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 1,583 ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಶುಕ್ರವಾರ (ಸೆ.17) ಲಸಿಕೆ ವಿತರಣೆಯಲ್ಲಿ ಭಾರತ ವಿಶ್ವದಾಖಲೆ ನಿರ್ಮಾಣ ಮಾಡಿತ್ತು. ಒಂದೇ ದಿನ 2.27 ಕೋಟಿ ಡೋಸ್ ಲಸಿಕೆ ನೀಡುವ ಮೂಲಕ ಈ ದಾಖಲೆ ಮಾಡಿದ ಜತ್ತಿನ ಎರಡನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ.