ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,079 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 560 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಜುಲೈ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಚ್ಚಿಬಿದ್ದ ಜರ್ಮನಿ! ಸಾವಿನ ಪ್ರವಾಹಕ್ಕೆ ಗ್ರಾಮಗಳೇ ಮಾಯ, 120 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 3,10,64,908ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,13,091ಕ್ಕೆ ತಲುಪಿದೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,24,025ಕ್ಕೆ ಏರಿಕೆಯಾಗಿದೆ ಎಂದು ಹೇಳಿದೆ.
ಇತ್ತೀಚೆಗೆ ಕೋವಿಡ್ 19 ಸೋಂಕು ಪ್ರಕರಣ ಇಳಿಕೆಯಾಗುತ್ತಿದ್ದು, ವಾರದ ಪಾಸಿಟಿವಿಟಿ ದರ ಶೇ.2.10ಕ್ಕೆ ಇಳಿದಿದ್ದು, ದಿನದ ಪಾಸಿಟಿವಿಟಿ ದರ ಶೇ.1.91ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದೆ.
ಜುಲೈ 16ರವರೆಗೆ 44,20,21,954 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ, ಶುಕ್ರವಾರ 19,98,715 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ತಿಳಿಸಿದೆ.