ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,667 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 478 ಮಂದಿ ಸಾವನ್ನಪ್ಪಿರುವುದಾಗಿ ಶನಿವಾರ (ಆಗಸ್ಟ್ 14) ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಅಂಕ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಂದು ಹುಟ್ಟುಹಬ್ಬದ ಸಂಭ್ರಮ: ಉದಯವಾಣಿ ಜೊತೆ ಚಂದನವನದ ಸುಧಾ’ರಾಣಿ’ ಮಾತುಕತೆ
ದೇಶದಲ್ಲಿ ಕೋವಿಡ್ ನಿಂದ ಈವರೆಗೆ ಒಟ್ಟು 4,30,732 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಒಟ್ಟು 3,13,38,088 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24ಗಂಟೆಗಳಲ್ಲಿ 35,743 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,87,673ಕ್ಕೆ ಏರಿಕೆಯಾಗಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.2.05ರಷ್ಟಿದೆ. ಸತತವಾಗಿ ಕಳೆದ 48 ದಿನಗಳಿಂದ ದೇಶದಲ್ಲಿ ಪ್ರತಿದಿನ 50,000ಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ ಎಂದು ಸಚಿವಾಲಯ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 2,446 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ಬಹಿರಂಗಗೊಂಡಿದ್ದು, ದೇಶದಲ್ಲಿ ಈವರೆಗೆ 53.61 ಕೋಟಿ ಡೋಸ್ ಗಳಷ್ಟು ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ.