ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 38,948 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 219 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 06) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಭದ್ರಾವತಿ 29ನೇ ವಾರ್ಡ್ ನಲ್ಲಿ ಜೆಡಿಎಸ್ ಗೆ ಭರ್ಜರಿ ಗೆಲುವು, ಬಿಜೆಪಿಗೆ ಕೇವಲ 70 ಮತ!
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,30,27,621ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,40,752ಕ್ಕೆ ಹೆಚ್ಚಳವಾಗಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.
ಕಳೆದ 24ಗಂಟೆಗಳಲ್ಲಿ ದೇಶದಲ್ಲಿ 43,903 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ದೇಶಾದ್ಯಂತ ಕೋವಿಡ್ ನಿಂದ ಗುಣಮುಖರಾದವರ ಸಂಖ್ಯೆ 3,21,81,995ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,04,874ಕ್ಕೆ ಹೆಚ್ಚಳವಾಗಿದೆ.
ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.97.44ಕ್ಕೆ ಏರಿಕೆಯಾಗಿದ್ದು, ವಾರದ ಪಾಸಿಟಿವಿಟಿ ದರ ಶೇ.2.58ರಷ್ಟಿದ್ದು, ಇದು ಕಳೆದ 73 ದಿನಗಳ ಬಳಿಕದ ಕನಿಷ್ಠ ಪ್ರಮಾಣದ್ದಾಗಿದೆ ಎಂದು ವರದಿ ತಿಳಿಸಿದೆ.