ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 39,097 ಕೋವಿಡ್ 19 ನೂತನ ಸೋಂಕು ಪ್ರಕರಣ ಪತ್ತೆಯಾಗಿದ್ದು, 546 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಜುಲೈ24) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮಲೆನಾಡಿನಲ್ಲಿ ಮುಂದುವರೆದ ಮಳೆ: ಕುಸಿದು ಬಿದ್ದ ಮನೆ, ನಾಟಿ ಮಾಡಿದ ಗದ್ದೆಗಳು ಜಲಾವೃತ
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,13,32,159 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ 4,20,016 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಭಾರತದಲ್ಲಿ 4,08,977 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಹೇಳಿದೆ.
ಒಟ್ಟು ಈವರೆಗೆ ದೇಶದಲ್ಲಿ 3,05,03,166 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಕಳೆದ 24ಗಂಟೆಗಳಲ್ಲಿ 35,087 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.35ಕ್ಕೆ ಏರಿಕೆಯಾಗಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ನೀಡಿರುವ ಮಾಹಿತಿ ಪ್ರಕಾರ, ಭಾರತದಲ್ಲಿ ಈವರೆಗೆ 42.34 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ತಿಳಿಸಿದೆ. ಕೋವಿಡ್ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ನೀಡುವಿಕೆಯನ್ನು ಚುರುಕುಗೊಳಿಸಲಾಗಿದೆ.