ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 39,361 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 416 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಜುಲೈ 26) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಜನಾದೇಶ ಇಲ್ಲದ ಪ್ರಜಾಪ್ರಭುತ್ವ ವಿರೋಧಿ ಸರ್ಕಾರ: ಎಚ್.ಸಿ.ಮಹದೇವಪ್ಪ
ದೇಶದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 3,14,11,262ಕ್ಕೆ ಏರಿಕೆಯಾಗಿದೆ. ಅಷ್ಟೇ ಅಲ್ಲ ಕೋವಿಡ್ ಸೋಂಕಿನಿಂದ 4,20,967 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
ದೇಶದಲ್ಲೀಗ 4,11,189 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24ಗಂಟೆಗಳಲ್ಲಿ 381 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ ಒಟ್ಟು 3,05,79,106 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24ಗಂಟೆಗಳಲ್ಲಿ 35,968 ಜನರು ಚೇತರಿಸಿಕೊಂಡಿದ್ದಾರೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ದೇಶದಲ್ಲಿ ಶೇ.97.35ರಷ್ಟು ಚೇತರಿಕೆ ಪ್ರಮಾಣವಿದೆ. ಈವರೆಗೆ 45.37 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಕಳೆದ 24ಗಂಟೆಗಳಲ್ಲಿ 59,39,010 ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.