ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40,120 ನೂತನ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3.20 ಕೋಟಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಆಗಸ್ಟ್ 13) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಪ್ರತೀಕಾರ: ಹಾವು ಕಚ್ಚಿದ ಕೋಪಕ್ಕೆ ಹಾವನ್ನೇ ಕಚ್ಚಿ ಕೊಂದು ಹಾಕಿದ ಈ ವ್ಯಕ್ತಿ!
ಕಳೆದ 24ಗಂಟೆಯಲ್ಲಿ ದೇಶದಲ್ಲಿ ಕೋವಿಡ್ ನಿಂದ 585 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4.3 ಲಕ್ಷಕ್ಕೆ ಏರಿಕೆಯಾಗಿದೆ. ಪ್ರಸ್ತುತ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3.85 ಲಕ್ಷಕ್ಕೆ ಇಳಿಕೆಯಾಗಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,295 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ 3,13,02,345 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿನ ಚೇತರಿಕೆ ಪ್ರಮಾಣ ಶೇ.97.46ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.2.04ರಷ್ಟಿದೆ ಎಂದು ವರದಿ ತಿಳಿಸಿದೆ.
ವಾರದ ಪಾಸಿಟಿವಿಟಿ ದರ ಶೇ.2.13ರಷ್ಟಿದೆ. ಕೋವಿಡ್ ಲಸಿಕೆ ಅಭಿಯಾನದಲ್ಲಿ ದೇಶಾದ್ಯಂತ ಈವರೆಗೆ ಅಂದಾಜು 52.95 ಕೋಟಿ ಡೋಸ್ ಗಳಷ್ಟು ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.