Advertisement

ಭಾರತದಲ್ಲಿ 3 ತಿಂಗಳ ಬಳಿಕ 4,000 ದಾಟಿದ ಕೋವಿಡ್ ಪ್ರಕರಣಗಳ ಸಂಖ್ಯೆ, 10 ಮಂದಿ ಸಾವು

10:23 AM Jun 03, 2022 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 4,041 ಕೋವಿಡ್ 19 ಸೋಂಕು ಪ್ರಕರಣ ದೃಢವಾಗಿದ್ದು, ಹತ್ತು ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಜೂನ್ 03) ಬಿಡುಗಡೆಗೊಳಿಸಿರುವ ಅಂಕಿ-ಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ದೊಡ್ಡ ಗೌಡರ ರಾಜಕೀಯ: ಖರ್ಗೆ ಎಂಟ್ರಿಯಿಂದ ಶುರುವಾಯ್ತೆ ಡಿಕೆ, ಸಿದ್ದು ಬಣಕ್ಕೆ ಭೀತಿ?

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 21, 177ಕ್ಕೆ ಏರಿಕೆಯಾಗಿದೆ. ಗುರುವಾರ ಭಾರತದಲ್ಲಿ 3,712 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಸಂಖ್ಯೆ 3 ತಿಂಗಳ ಬಳಿಕ 4 ಸಾವಿರ ದಾಟಿದಂತಾಗಿದೆ.

ಭಾರತದಲ್ಲಿನ ಕೋವಿಡ್ 19 ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 4,31,68,585ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,24,651ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ದೇಶದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ 98.74ರಷ್ಟಿದೆ. ಒಂದೇ ದಿನದಲ್ಲಿ ಭಾರತದಲ್ಲಿ 1,668 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿನ ಪ್ರತಿದಿನ ಪಾಸಿಟಿವಿಟಿ ದರ ಶೇ.0.60ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.56ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next