ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,909 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 380 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಸ್ಟ್ 30) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಜನರ ಹಸಿವನ್ನು ಅಣಕಿಸುವ ಬಿಜೆಪಿ ಸರ್ಕಾರ ‘ಸಾವಿನಭಾಗ್ಯ’ ನೀಡುತ್ತಿದೆ: ಕಾಂಗ್ರೆಸ್
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,27,37,939 ಕೋಟಿಗೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,38,210ಕ್ಕೆ ತಲುಪಿದೆ ಎಂದು ಅಂಕಿ ಅಂಶದಲ್ಲಿ ವಿವರಿಸಲಾಗಿದೆ.
ಕಳೆದ 24ಗಂಟೆಗಳಲ್ಲಿ 34,763 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶಾದ್ಯಂತ 3,19,23,405 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 3,76,324 ಲಕ್ಷಕ್ಕೆ ಏರಿಕೆಯಾಗಿದೆ.
ಕಳೆದ 24ಗಂಟೆಗಳಲ್ಲಿ 7,766 ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.97.51ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ವಾರದ ಪಾಸಿಟಿವಿಟಿ ದರ ಶೇ.2.41ರಷ್ಟಿದೆ.