ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 44,111 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 738 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ(ಜುಲೈ03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಇಂದು ಅನ್‌ಲಾಕ್ 3.0 ಕುರಿತು ಸಭೆ: ಮತ್ತಷ್ಟು ನಿರ್ಬಂಧ ಸಡಿಲಿಕೆ ಸಾಧ್ಯತೆ
ಸುಮಾರು 100 ದಿನಗಳ ನಂತರ ದೇಶದಲ್ಲಿ ಸಕ್ರಿಯ ಕೋವಿಡ್ 19 ಪ್ರಕರಣಗಳ ಸಂಖ್ಯೆ ಐದು ಲಕ್ಷಕ್ಕಿಂತ ಕೆಳಕ್ಕೆ ಇಳಿಕೆಯಾಗಿದೆ. ದೇಶದಲ್ಲಿ ಈಗ 4,95,533 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ಹೇಳಿದೆ.
ಕಳೆದ 24ಗಂಟೆಯಲ್ಲಿ ಕೋವಿಡ್ ನಿಂದ 738 ಮಂದಿ ಸಾವನ್ನಪ್ಪಿದ್ದು, 57,477 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಈವರೆಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,01,050ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಟ್ಟು 2,96,05,779 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ತಿಳಿಸಿದೆ.
ದೇಶದಲ್ಲಿನ ವಾರದ ಪಾಸಿಟಿವಿಟಿ ದರ ಶೇ.2.50ಕ್ಕೆ ಇಳಿಕೆಯಾಗಿದ್ದು, ದಿನದ ಪಾಸಿಟಿವಿಟಿ ದರ ಶೇ.2.35ಕ್ಕೆ ಇಳಿಕೆಯಾಗಿದೆ. ಏತನ್ಮಧ್ಯೆ ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಕೇರಳ, ಅರುಣಾಚಲ ಪ್ರದೇಶ, ತ್ರಿಪುರಾ, ಒಡಿಶಾ, ಚತ್ತೀಸ್ ಗಢ್ ಮತ್ತು ಮಣಿಪುರಕ್ಕೆ ಕೇಂದ್ರದ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.