ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 44,684 ಕೋವಿಡ್ ಸೋಂಕು ಪ್ರಕರಣ ದಾಖಲಾಗಿದ್ದು, ದೇಶದ ಒಟ್ಟು ಪ್ರಕರಣಗಳ ಸಂಖ್ಯೆ 87, 73,479ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ನವೆಂಬರ್ 14, 2020) ತಿಳಿಸಿದೆ.
ದೇಶದಲ್ಲಿ 480,719 ಸಕ್ರಿಯ ಕೋವಿಡ್ 19 ಸೋಂಕು ಪ್ರಕರಣಗಳು ಇದ್ದು, ಈವರೆಗೆ ಆಸ್ಪತ್ರೆಯಿಂದ 81,63,572 ಜನರು ಡಿಸ್ ಚಾರ್ಜ್ ಆಗಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ ಕೋವಿಡ್ 19 ಸೋಂಕಿಗೆ 520 ಮಂದಿ ಸಾವನ್ನಪ್ಪಿದ್ದು, ಒಟ್ಟು ದೇಶಾದ್ಯಂತ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 1,29,188ಕ್ಕೆ ಏರಿಕೆಯಾಗಿದೆ ಎಂದು ವರದಿ ತಿಳಿಸಿದೆ.
ಆರೋಗ್ಯ ಸಚಿವಾಲಯದ ಮತಎಣಿಕೆ ಪ್ರಕಾರ, ಶುಕ್ರವಾರ ಭಾರತದಲ್ಲಿ ಕೋವಿಡ್ 19 ಸೋಂಕಿನ ಪ್ರಕರಣ 5 ಲಕ್ಷಕ್ಕಿಂತ ಕಡಿಮೆಯಾಗಿತ್ತು. ಇದರೊಂದಿಗೆ ಕೋವಿಡ್ 19 ಸೋಂಕಿಗೆ ಒಳಗಾದವರ ಚೇತರಿಕೆ ಪ್ರಮಾಣ ಹೆಚ್ಚಳವಾದಂತಾಗಿದೆ ಎಂದು ತಿಳಿಸಿದೆ.
ಇದನ್ನೂ ಓದಿ: ಬಟ್ಟೆಯಂಗಡಿಯಲ್ಲಿ ಅಗ್ನಿ ಅವಘಡ: ಬೆಂಕಿ ನಂದಿಸಲು ಹೋದ ಇಬ್ಬರು ಅಗ್ನಿಶಾಮಕ ಸಿಬ್ಬಂದಿ ಸಾವು
ಭಾರತದಲ್ಲಿ ಕೋವಿಡ್ 19 ಸೋಂಕಿನ ಚೇತರಿಕೆ ಪ್ರಮಾಣ ಶೇ.92.97ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ. ಹತ್ತು ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶದ ಶೇ.77.83ರಷ್ಟು ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಮೇಲೆ ನಿಗಾ ಇರಿಸಲಾಗಿದೆ ಎಂದು ಹೇಳಿದೆ.