Advertisement

ಭಾರತದಲ್ಲಿ ಕಳೆದ 24ಗಂಟೆಯಲ್ಲಿ 5,221, ಸಕ್ರಿಯ ಪ್ರಕರಣಗಳ ಸಂಖ್ಯೆ ಭಾರೀ ಇಳಿಕೆ

11:46 AM Sep 12, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 5,221 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,45,00,580 ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಸೆಪ್ಟೆಂಬರ್ 12) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಡಿಕೆಶಿ ಸುದ್ದಿಗೋಷ್ಠಿ ಬ್ಯಾನರ್ ನಲ್ಲಿ ಕಾಣೆಯಾದ ಸಿದ್ದರಾಮಯ್ಯ ಫೋಟೊ

ಒಂದೇ ದಿನದಲ್ಲಿ ಕೋವಿಡ್ 19 ಸೋಂಕಿನಿಂದ 15 ಮಂದಿ ಸಾವನ್ನಪ್ಪಿದ್ದು, ಈವರೆಗೆ ಭಾರತದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,165ಕ್ಕೆ ಏರಿಕೆಯಾಗಿದೆ.

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 47,176ಕ್ಕೆ ಇಳಿಕೆಯಾಗಿದೆ. ಭಾರತದಲ್ಲಿನ ಕೋವಿಡ್ 19 ಚೇತರಿಕೆ ದರ ಶೇ.98.71ರಷ್ಟಿದೆ ಎಂದು ಸಚಿವಾಲಯದ ಅಂಕಿಅಂಶದಲ್ಲಿ ವಿವರಿಸಿದೆ.

24ಗಂಟೆಗಳ ಅವಧಿಯಲ್ಲಿ 769 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಮೇ 4ರಂದು ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 2 ಕೋಟಿಗೆ ತಲುಪಿತ್ತು. ಕಳೆದ ವರ್ಷ ಜೂನ್ 23ರಂದು ಕೋವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿಗೆ ಏರಿಕೆಯಾಗಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next