Advertisement

ಭಾರತದಲ್ಲಿ 24ಗಂಟೆಯಲ್ಲಿ 5,326 ಕೋವಿಡ್ ಪ್ರಕರಣ ಪತ್ತೆ, 543 ಮಂದಿ ಸಾವು

10:25 AM Dec 21, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 5,326 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದೆ, 453 ಮಂದಿ ಕೋವಿಡ್ ನಿಂದ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ (ಡಿಸೆಂಬರ್ 21) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಭಟ್ಕಳ: ಆಗಸದಲ್ಲಿ ಸರಣಿ ಬೆಳಕಿನ ಓಟ; ಇದೇನಿದು ವಿಸ್ಮಯ?

ದೇಶಾದ್ಯಂತ ಈವರೆಗೆ ಕೋವಿಡ್ ಪ್ರಕರಣಗಳ ಸಂಖ್ಯೆ 3,47,52,164ಕ್ಕೆ ಏರಿಕೆಯಾಗಿದೆ. ಕೋವಿಡ್ ಸೋಂಕಿನಿಂದ ದೇಶಾದ್ಯಂತ 4,78,007 ಮಂದಿ ಸಾವನ್ನಪ್ಪಿದ್ದಾರೆ. ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 79,097ಕ್ಕೆ ಇಳಿಕೆಯಾಗಿದೆ.

ಕಳೆದ 24ಗಂಟೆಗಳಲ್ಲಿ 8,043 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ 3,41,95,060 ಮಂದಿ ಚೇತರಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 3,170 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next