Advertisement

ಭಾರತದಲ್ಲಿ 24ಗಂಟೆಯಲ್ಲಿ 5,554 ಕೋವಿಡ್ ಸೋಂಕು ಪ್ರಕರಣ ಪತ್ತೆ, ಸಾವಿನ ಸಂಖ್ಯೆ ಭಾರೀ ಇಳಿಕೆ

10:56 AM Sep 10, 2022 | Team Udayavani |

ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 5,554 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,44,90,283ಕೋಟಿಗೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಸೆ.10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ: ಕಾಂಗ್ರೆಸ್ ನಿಂದ 4 ಗಂಟೆಗಳ ಕಾಲ ಗುಜರಾತ್ ಬಂದ್

ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 48,850ಕ್ಕೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ಕೋವಿಡ್ ನಿಂದ 18 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಭಾರತದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,28,139ಕ್ಕೆ ತಲುಪಿದೆ.

ಭಾರತದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.70ರಷ್ಟಿದೆ. 24 ಗಂಟೆಯಲ್ಲಿ 786 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಪ್ರತಿದಿನದ ಪಾಸಿಟಿವಿಟಿ ದರ ಶೇ.1.47ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.1.80ರಷ್ಟಿದೆ. ದೇಶಾದ್ಯಂತ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,39,13,294 ಕೋಟಿಗೆ ಏರಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next