ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 58,077 ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, 657 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ ಒಟ್ಟು 5,07,177 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಫೆ.11) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಹಿಜಾಬ್ ವಿವಾದ: ಹೈಕೋರ್ಟ್ ಸೂಚನೆ ಪ್ರಶ್ನಿಸಿ ಮತ್ತೆ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿಗಳು
24ಗಂಟೆಯಲ್ಲಿ 92,987 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 6,97,802ಕ್ಕೆ ತಲುಪಿದೆ ಎಂದು ಸಚಿವಾಲಯ ಹೇಳಿದೆ.
ಒಂದೇ ದಿನದಲ್ಲಿ 1,50,407 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಾದ್ಯಂತ ಕೋವಿಡ್ ಸೋಂಕಿನಿಂದ ಒಟ್ಟು 4,13,31,158 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್ 19 ಚೇತರಿಕೆ ಪ್ರಮಾಣ ಶೇ.97.17ರಷ್ಟಿದೆ.
ಪ್ರತಿದಿನದ ಪಾಸಿಟಿವಿಟಿ ದರ ಶೇ.3.89ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ.5.76ರಷ್ಟಿದೆ. ಅಲ್ಲದೇ ದೇಶಾದ್ಯಂತ ಹಮ್ಮಿಕೊಂಡ ಕೋವಿಡ್ 19 ಲಸಿಕೆ ಅಭಿಯಾನದಡಿ ಈವರೆಗೆ 171.79 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.