ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 41,806 ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 581 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಜುಲೈ 15) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಮತ್ತೆ ಒಂದಾದ ಯಜಮಾನ ತಂಡ: ದರ್ಶನ್ ಡಿ 55 ಸಿನಿಮಾ ಅನೌನ್ಸ್
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,32,041ಕ್ಕೆ ಏರಿಕೆಯಾಗಿದೆ. ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,09,87,880ಕ್ಕೆ ಹೆಚ್ಚಳವಾಗಿದೆ. ಈವರೆಗೆ ಕೋವಿಡ್ ಸೋಂಕಿನಿಂದ 4,11,989 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಕೋವಿಡ್ ನಿಂದ ಚೇತರಿಸಿಕೊಂಡವರ ಸಂಖ್ಯೆ 3,01,43,850ಕ್ಕೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 39,130 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ, ಈವರೆಗೆ 4,38,011,958 ಮಂದಿ ಕೋವಿಡ್ ಸ್ಯಾಂಪಲ್ಸ್ ಪರೀಕ್ಷಿಸಲಾಗಿದೆ. ಕಳೆದ 24ಗಂಟೆಗಳಲ್ಲಿ 1,943,488 ಮಂದಿಯನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್
ವಿವರಿಸಿದೆ.
ದೇಶದ ಹಲವು ರಾಜ್ಯಗಳಲ್ಲಿ ಜನರು ಕೋವಿಡ್ ಮಾರ್ಗಸೂಚಿಯನ್ನು ಗಾಳಿಗೆ ತೂರಿ ಗುಂಪುಗೂಡುತ್ತಿರುವುದು ಕಳವಳಕಾರಿಯಾಗಿದೆ ಎಂದು ತಿಳಿಸಿರುವ ಕೇಂದ್ರ ಸರ್ಕಾರ ಈ ಬಗ್ಗೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.