ನವದೆಹಲಿ: ದೇಶಾದ್ಯಂತ ಕೋವಿಡ್ 19 ಸೋಂಕು ಪ್ರಕರಣ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24ಗಂಟೆಗಳಲ್ಲಿ 58,419 ಕೋವಿಡ್ ಪ್ರಕರಣ ವರದಿಯಾಗಿದ್ದು, 1,576 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ(ಜೂನ್ 20) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಅನ್‌ಲಾಕ್ ಘೋಷಣೆ ಮುನ್ನ ಎಚ್ಚರವಿರಲಿ : ರಾಜ್ಯಗಳಿಗೆ ಕೇಂದ್ರ ಸರಕಾರ ಪತ್ರ
ಕಳೆದ 81 ದಿನಗಳಲ್ಲಿ ಇದೇ ಮೊದಲ ಬಾರಿಗೆ 60 ಸಾವಿರಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣ ವರದಿಯಾಗಿದೆ. ದೇಶದ ಐದು ರಾಜ್ಯಗಳಲ್ಲಿ ಗರಿಷ್ಠ ಪ್ರಮಾಣದ ಸೋಂಕು ಪ್ರಕರಣ ಪತ್ತೆಯಾಗಿದೆ ಎಂದು ವರದಿ ವಿವರಿಸಿದೆ.
ಕೇರಳದಲ್ಲಿ 12,443 ಪ್ರಕರಣ, ಮಹಾರಾಷ್ಟ್ರದಲ್ಲಿ 8,912 ಕೋವಿಡ್ ಪ್ರಕರಣ, ತಮಿಳುನಾಡು 8,183, ಕರ್ನಾಟಕ 5,815 ಹಾಗೂ ಆಂಧ್ರಪ್ರದೇಶದಲ್ಲಿ 5,674 ಪ್ರಕರಣಗಳು ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ.
ಕೋವಿಡ್ ಪ್ರಕರಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್ ಲಾಕ್ ಡೌನ್ ನಿರ್ಬಂಧಗಳನ್ನು ಹಂತ, ಹಂತವಾಗಿ ತೆರವುಗೊಳಿಸುತ್ತಿದೆ. ಉತ್ತರಪ್ರದೇಶದಲ್ಲಿ ಜೂನ್ 21ರಿಂದ ರಾತ್ರಿ ಕರ್ಫ್ಯೂವನ್ನು ಎರಡು ಗಂಟೆಗಳ ಕಾಲ ಸಡಿಲಿಕೆ ಮಾಡುವುದಾಗಿ ಘೋಷಿಸಿದೆ.