ನವದೆಹಲಿ: ಭಾರತದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಮುಖವಾಗಿದ್ದು, ಕಳೆದ 24ಗಂಟೆಯಲ್ಲಿ 6,561 ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಮಾರ್ಚ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಉಕ್ರೇನ್ ಸಂಕಷ್ಟ: ಅಪಾಯದ ಸ್ಥಿತಿಯಲ್ಲಿ ಉಜಿರೆಯ ವಿದ್ಯಾರ್ಥಿನಿ ಹೀನಾ ಫಾತಿಮಾ
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,29,38,599ಕ್ಕೆ ಏರಿಕೆಯಾಗಿದೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 85,680ಕ್ಕೆ ಇಳಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಒಂದೇ ದಿನದಲ್ಲಿ ಭಾರತದಲ್ಲಿ ಕೋವಿಡ್ 19 ಸೋಂಕಿನಿಂದ 223 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದೇಶಾದ್ಯಂತ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,14,246ಕ್ಕೆ ಹೆಚ್ಚಳವಾಗಿದೆ.
ಕಳೆದ 24ದಿನಗಳಿಂದ ದೇಶದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಪ್ರಮಾಣದಲ್ಲಿ ವರದಿಯಾಗುತ್ತಿದೆ. ಕೋವಿಡ್ ಒಟ್ಟು ಪ್ರಕರಣಗಳಿಗಿಂತ ಸಕ್ರಿಯ ಪ್ರಕರಣಗಳ ಸಂಖ್ಯೆ 0.20ರಷ್ಟಿದೆ. ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.60ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿರುವುದಾಗಿ ವರದಿ ತಿಳಿಸಿದೆ.