ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 6,563 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 132 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಡಿಸೆಂಬರ್ 20) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರಾಜ್ಯದಲ್ಲಿ ಗುಪ್ತಚರ ಇಲಾಖೆ ಸತ್ತು ಹೋಗಿದೆ: ಸಿದ್ದರಾಮಯ್ಯ ವಾಗ್ದಾಳಿ
ದೇಶದಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಒಟ್ಟು ಸಂಖ್ಯೆ 3,47,46,838ಕ್ಕೆ ಏರಿಕೆಯಾಗಿದೆ. ದೇಶಾದ್ಯಂತ ಈವರೆಗೆ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,77,554ಕ್ಕೆ ತಲುಪಿದೆ ಎಂದು ವರದಿ ಹೇಳಿದೆ.
ಕಳೆದ 24ಗಂಟೆಗಳ್ಲಲಿ 8,077 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. 24ಗಂಟೆಗಳ ಅವಧಿಯಲ್ಲಿ 1,646 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ, ಇದರೊಂದಿಗೆ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 82,267ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.
ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.39ರಷ್ಟಿದ್ದು, ಇದು 2020ರ ಮಾರ್ಚ್ ನಂತರದ ಗರಿಷ್ಠದ್ದಾಗಿದೆ. ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 150ಕ್ಕೆ ಏರಿಕೆಯಾಗಿದೆ ಎಂದು ವರದಿ ಹೇಳಿದೆ.