ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,145 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 289 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಈವರೆಗೆ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,47,33,194ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ (ಡಿಸೆಂಬರ್ 18) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಳಗಾವಿ ಅಧಿವೇಶನಕ್ಕೆ ಬಂದ ವಾಹನಗಳ ಮೇಲೆ ಕಲ್ಲು ತೂರಾಟ: 27 ಮಂದಿ ಬಂಧನ
ಕೋವಿಡ್ ಸೋಂಕಿನಿಂದ ಒಟ್ಟು 4,77,158 ಮಂದಿ ಸಾವನ್ನಪ್ಪಿದ್ದಾರೆ. 24ಗಂಟೆಯಲ್ಲಿ 8,706 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಕಳೆದ 24ಗಂಟೆಗಳ ಅವಧಿಯಲ್ಲಿ 1,850 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 84,565ಕ್ಕೆ ಇಳಿಕೆಯಾಗಿದ್ದು, ಇದು 569 ದಿನಗಳ ಕನಿಷ್ಠದ್ದಾಗಿದೆ.
ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.38ರಷ್ಟಿದ್ದು, ಇದು 2020ರ ಮಾರ್ಚ್ ನಂತರದ ಗರಿಷ್ಠ ಪ್ರಮಾಣದ್ದಾಗಿದೆ. ಕಳೆದ 24ಗಂಟೆಗಳಲ್ಲಿ 62,06,244 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ 136.66 ಕೋಟಿ ಡೋಸ್ ಲಸಿಕೆ ನೀಡಲಾಗಿದೆ ಎಂದು ಅಂಕಿಅಂಶ ವಿವರಿಸಿದೆ.