Advertisement

ಭಾರತದಲ್ಲಿ 24ಗಂಟೆಗಳಲ್ಲಿ 7189 ಕೋವಿಡ್ ಪ್ರಕರಣ ಪತ್ತೆ, ಒಮಿಕ್ರಾನ್ ಸಂಖ್ಯೆ 415ಕ್ಕೆ ಏರಿಕೆ

10:22 AM Dec 25, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7, 189 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 387 ಮಂದಿ ಸಾವನ್ನಪ್ಪಿದ್ದು, ಈವರೆಗೆ ದೇಶಾದ್ಯಂತ ಕೋವಿಡ್ ನಿಂದ 4,79,520 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ (ಡಿಸೆಂಬರ್ 25) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:‘ರೈಡರ್’ ಚಿತ್ರವಿಮರ್ಶೆ: ಫ್ಯಾಮಿಲಿ ಪ್ಯಾಕೇಜ್‌ ನಲ್ಲಿ ಪ್ರೇಮ್‌ ಕಹಾನಿ

ದೇಶದಲ್ಲಿ 24ಗಂಟೆಗಳ ಅವಧಿಯಲ್ಲಿ 7,286 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು 3,42,23,263 ಮಂದಿ ಗುಣಮುಖರಾಗಿದ್ದಾರೆ. ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು, ಕನಿಷ್ಠ 115 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

415 ಒಮಿಕ್ರಾನ್ ಪ್ರಕರಣಗಳಲ್ಲಿ, ಅತೀ ಹೆಚ್ಚು(108) ಮಹಾರಾಷ್ಟ್ರದಲ್ಲಿ ಪತ್ತೆಯಾಗಿದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ 79, ಗುಜರಾತ್ ನಲ್ಲಿ 43, ತೆಲಂಗಾಣ 38, ಕೇರಳದಲ್ಲಿ 37, ತಮಿಳುನಾಡಿನಲ್ಲಿ 34 ಪ್ರಕರಣಗಳು ಪತ್ತೆಯಾಗಿದೆ. ಆದರೆ ಈಶಾನ್ಯ ರಾಜ್ಯಗಳಲ್ಲಿ ಈವರೆಗೂ ಒಮಿಕ್ರಾನ್ ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 77,032ಕ್ಕೆ ಇಳಿಕೆಯಾಗಿದೆ. ದೇಶಾದ್ಯಂತ ಕೋವಿಡ್ ಲಸಿಕೆ ಅಭಿಯಾನದಲ್ಲಿ ಈವರೆಗೆ 141.01 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next