ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 37, 154 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 724 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಜುಲೈ 12) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಗುಡುಗು ಮಿಂಚಿನ ಹೊಡೆತಕ್ಕೆ 20 ಮಂದಿ ಬಲಿ, 10ಕ್ಕೂ ಹೆಚ್ಚು ಮಂದಿಗೆ ಗಾಯ
ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,50,899ಕ್ಕೆ ಏರಿಕೆಯಾಗಿದೆ. ಅಲ್ಲದೇ ಚೇತರಿಕೆ ಪ್ರಮಾಣ ಶೇ.97.22ಕ್ಕೆ ಹೆಚ್ಚಳವಾಗಿದೆ ಎಂದು ವಿವರಿಸಿದೆ. ಭಾರತದಲ್ಲಿ ಪ್ರತಿದಿನ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಹಲವಾರು ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳು ಹೊಸ ಕೋವಿಡ್ 19 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ ಎಂದು ವರದಿ ತಿಳಿಸಿದೆ.
ದೆಹಲಿ, ಉತ್ತರಪ್ರದೇಶ, ಗೋವಾ ಸೇರಿದಂತೆ ಹಲವು ರಾಜ್ಯಗಳು ಮುಂದಿನ ಹಂತದ ಅನ್ ಲಾಕ್ ಪ್ರಕ್ರಿಯೆ ಜಾರಿಗೊಳಿಸಲು ಸಿದ್ಧತೆ ನಡೆಸಿವೆ. ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ ಹರ್ಯಾಣ, ತಮಿಳುನಾಡು ರಾಜ್ಯಗಳಲ್ಲಿ ಲಾಕ್ ಡೌನ್ ವಿಸ್ತರಣೆಯಾಗಿದೆ.
ಜಾಗತಿಕವಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 186.7 ಮಿಲಿಯನ್ ಗೆ ಏರಿಕೆಯಾಗಿದ್ದು, ಕೋವಿಡ್ 19 ನಿಂದ ಸಾವನ್ನಪ್ಪಿರುವವರ ಸಂಖ್ಯೆ 4.02 ಮಿಲಿಯನ್ ಗೆ ಏರಿಕೆಯಾಗಿದೆ. ಸುಮಾರು 3.43 ಬಿಲಿಯನ್ ನಷ್ಟು ಲಸಿಕೆಯನ್ನು ನೀಡಲಾಗಿದೆ ಎಂದು ಜಾನ್ಸ್ ಹೋಪ್ ಕಿನ್ಸ್ ಯೂನಿರ್ವಸಿಟಿ ಮಾಹಿತಿ ನೀಡಿದೆ.