Advertisement

ಭಾರತದಲ್ಲಿ 24 ಗಂಟೆಗಳಲ್ಲಿ 7,350 ಕೋವಿಡ್ ಪ್ರಕರಣ ಪತ್ತೆ, 7,973 ಮಂದಿ ಗುಣಮುಖ

10:45 AM Dec 13, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,350 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 202 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,97,860ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ಡಿಸೆಂಬರ್ 13) ಬಿಡುಗಡೆಗೊಳಿಸಿರುವ ಅಂಕಿ ಅಂಶದಲ್ಲಿ ತಿಳಿಸಿದೆ.

Advertisement

ಕೋವಿಡ್ ಸೋಂಕಿನಿಂದ ಈವರೆಗೆ 4,75,636 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,973 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 24 ಗಂಟೆಗಳ ಅವಧಿಯಲ್ಲಿ 825 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.

ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 91,456ಕ್ಕೆ ತಲುಪಿದೆ. ದೇಶಾದ್ಯಂತ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.37ರಷ್ಟಿದೆ. ಇದು 2020ರ ಮಾರ್ಚ್ ನಂತರ ಗರಿಷ್ಠ ಪ್ರಮಾಣದ್ದಾಗಿದೆ ಎಂದು ಅಂಕಿಅಂಶ ತಿಳಿಸಿದೆ.

ಪ್ರತಿದಿನದ ಪಾಸಿಟಿವಿಟಿ ದರ ಶೇ.0.86ರಷ್ಟಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.0.69ರಷ್ಟಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ. ಭಾರತದಲ್ಲಿ ಕೋವಿಡ್ 19 ಲಸಿಕೆ ಅಭಿಯಾನದಲ್ಲಿ ಈವರೆಗೆ 133.17 ಕೋಟಿ ದಾಖಲೆ ಪ್ರಮಾಣದ ಕೋವಿಡ್ ಡೋಸ್ ನೀಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next