Advertisement

ಭಾರತದಲ್ಲಿ 24ಗಂಟೆಗಳಲ್ಲಿ 7,447 ಕೋವಿಡ್ ಪ್ರಕರಣ ಪತ್ತೆ, 7,886 ಮಂದಿ ಗುಣಮುಖ

10:43 AM Dec 17, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 7,447 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,47,26,049ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 17) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:2021 : ಕೋವಿಡ್ ನಡುವೆಯೂ ಶತಕದ ಗಡಿ ದಾಟಿದ ಕನ್ನಡ ಸಿನಿಮಾಗಳು

ಕೋವಿಡ್ ಸೋಂಕಿನಿಂದ ಈವರೆಗೆ ದೇಶದಲ್ಲಿ 4,76,869 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24ಗಂಟೆಗಳಲ್ಲಿ ಕೋವಿಡ್ ನಿಂದ 7,886 ಮಂದಿ ಗುಣಮುಖರಾಗಿದ್ದಾರೆ ಎಂದು ಅಂಕಿಅಂಶ ವಿವರಿಸಿದೆ.

24ಗಂಟೆಗಳ ಅವಧಿಯಲ್ಲಿ 830 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 86,415ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

ದೇಶದಲ್ಲಿ ಕೋವಿಡ್ ನಿಂದ ಒಟ್ಟು 391 ಮಂದಿ ಸಾವನ್ನಪ್ಪಿದ್ದು, ಇದರಲ್ಲಿ 320 ಮಂದಿ ಕೇರಳದಲ್ಲಿ ಹಾಗೂ ಮಹಾರಾಷ್ಟ್ರದಲ್ಲಿ 19 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ. ಭಾರತದಲ್ಲಿ ಈವರೆಗೆ 139.99 ಕೋಟಿ ಕೋವಿಡ್ ಡೋಸ್ ನೀಡಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next