ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಯಲ್ಲಿ 83,876 ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದ್ದು, 895 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶಾದ್ಯಂತ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಫೆ.07) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಸಂಕಷ್ಟದ ಸಮಯದಲ್ಲಿ ಬಿಸಿಸಿಐ ಮಾನ ಕಾಪಾಡಿದ್ದ ಲತಾ ಮಂಗೇಶ್ಕರ್!
24ಗಂಟೆಯಲ್ಲಿ 1,16,073 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ಇದೀಗ 11,08,938ಕ್ಕೆ ತಲುಪಿದೆ ಎಂದು ಅಂಕಿಅಂಶ ವಿವರಿಸಿದೆ.
ದೇಶಾದ್ಯಂತ ಒಂದೇ ದಿನ 1,99,054 ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡಿದ್ದು, ಭಾರತದಲ್ಲಿ ಈವರೆಗೆ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,06,60,202ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.96.19ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ ಶೇ.7.25ರಷ್ಟಿದೆ. ಅಲ್ಲದೇ ವಾರದ ಪಾಸಿಟಿವಿಟಿ ದರ ಶೇ.9.18ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಭಾರತದಾದ್ಯಂತ ಕೋವಿಡ್ ಲಸಿಕೆ ಅಭಿಯಾನದಡಿ ಈವರೆಗೆ ಒಟ್ಟು 169.63 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. 24ಗಂಟೆಗಳ ಅವಧಿಯಲ್ಲಿ 11,56,363 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.