ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8.488 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,45,18,901ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ(ನವೆಂಬರ್ 22) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ: 8 ವರ್ಷ ಪ್ರಾಯದ ಬಾಲಕಿಯ ಮೇಲೆ ಸಂಬಂಧಿಕರಿಂದಲೇ ಲೈಂಗಿಕ ದೌರ್ಜನ್ಯ; ಬಂಧನ
ಈವರೆಗೆ ದೇಶದಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 4,65,911ಕ್ಕೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 12,510 ಮಂದಿ ಗುಣಮುಖರಾಗಿದ್ದು, ದೇಶಾದ್ಯಂತ ಒಟ್ಟು 3,39,34,547 ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 1,18,443ಕ್ಕೆ ಇಳಿಕೆಯಾಗಿದೆ, ಇದು 533 ದಿನಗಳ ನಂತರ ವರದಿಯಾದ ಕನಿಷ್ಠ ಸಂಖ್ಯೆಯಾಗಿದೆ. ಕಳೆದ 24ಗಂಟೆಗಳಲ್ಲಿ 4,271 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ ಎಂದು ಅಂಕಿಅಂಶ ಹೇಳಿದೆ.
ಸತತ 45 ದಿನಗಳಿಂದ ದೇಶದಲ್ಲಿ 20,000 ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, 148 ದಿನಗಳಿಂದ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.