ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,503 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 624 ಮಂದಿ ಸಾವನ್ನಪ್ಪಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ 3,46,74,744ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 10) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಚಂದನವನದಲ್ಲಿ ಶ್ರೀಧರ್ ಸಂಗೀತ ಸಂಭ್ರಮ: ಕೈ ತುಂಬಾ ಸಿನಿಮಾ, ವಿಭಿನ್ನ ಹಾಡು
ದೇಶದಲ್ಲಿ ಕೋವಿಡ್ ನಿಂದ 4,74,735 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಭಾರತದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 94,943ಕ್ಕೆ ಇಳಿಕೆಯಾಗಿದೆ ಎಂದು ಅಂಕಿಅಂಶ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಅಲ್ಲದೇ ಒಂದೇ ದಿನದಲ್ಲಿ 7,678 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ದೇಶಾದ್ಯಂತ 3,41,05,066 ಮಂದಿ ಚೇತರಿಸಿಕೊಂಡಿದ್ದಾರೆ.
ಭಾರತದಲ್ಲಿನ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.36ರಷ್ಟಿದೆ. ದಿನಂಪ್ರತಿಯ ಪಾಸಿಟಿವಿಟಿ ದರ ಶೇ.0.66ರಷ್ಟಿದೆ. ಇದು ಕಳೆದ 67ದಿನಗಳಲ್ಲಿ ಶೇ.2ಕ್ಕಿಂತ ಕಡಿಮೆ ಪ್ರಮಾಣದಲ್ಲಿದೆ.
ಕೋವಿಡ್ 19, ಕೋವಿಡ್ ಲಸಿಕೆ, ಕೇಂದ್ರ ಆರೋಗ್ಯ ಸಚಿವಾಲಯ, Covid19, covid vaccine, Health ministry, Udayavani News