ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 8,603 ನೂತನ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 415 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ(ಡಿಸೆಂಬರ್ 04) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ತಿರುಪತಿಯಲ್ಲಿ ಆಣೆ ಮಾಡಲು ನಾನು ಸಿದ್ದ, ಆದರೆ..:ಎಚ್ಚರಿಕೆ ನೀಡಿದ ಶಾಸಕ ಎಸ್.ಆರ್.ವಿಶ್ವನಾಥ್
ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,24,360ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,70,530ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ಹೇಳಿದೆ.
ಕಳೆದ 24ಗಂಟೆಗಳಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 99,974 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 160 ದಿನಗಳಿಂದ ದೇಶದಲ್ಲಿ ಪ್ರತಿದಿನ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರಕರಣಗಳು ವರದಿಯಾಗುತ್ತಿದೆ.
ಭಾರತದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.98.35ರಷ್ಟಿದೆ. ದಿನಂಪ್ರತಿಯ ಪಾಸಿಟಿವಿಟಿ ದರ 0.69ರಷ್ಟಿರುವುದಾಗಿ ಅಂಕಿಅಂಶದಲ್ಲಿ ತಿಳಿಸಿದೆ.