ನವದೆಹಲಿ:ಭಾರತದಲ್ಲಿ ಕೋವಿಡ್ 19 ಸೋಂಕು ಮತ್ತು ಸಾವಿನ ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡಿದ್ದು, ಕಳೆದ 24ಗಂಟೆಯಲ್ಲಿ 861 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 6 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಏಪ್ರಿಲ್ 11) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ರಾಮ ನವಮಿ ದಿನ ನಾನ್ ವೆಜ್ ಊಟ: ಜೆಎನ್ ಯು ಹಾಸ್ಟೆಲ್ ನಲ್ಲಿ ಮಾರಾಮಾರಿ;16 ಮಂದಿಗೆ ಗಾಯ
ದೇಶಾದ್ಯಂತ ಈವರೆಗೆ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 5,21,691ಕ್ಕೆ ಏರಿಕೆಯಾಗಿದೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 11,058ಕ್ಕೆ ಇಳಿಕೆಯಾಗಿದೆ.
24 ಗಂಟೆಗಳ ಅವಧಿಯಲ್ಲಿ 74 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಒಂದೇ ದಿನದಲ್ಲಿ ದೇಶದಲ್ಲಿ 929 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 4,25,03,383ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ ಕೋವಿಡ್ 19 ಚೇತರಿಕೆ ದರ ಶೇ.98.76ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ. ಪ್ರತಿದಿನ ಪಾಸಿಟಿವಿಟಿ ದರ ಶೇ.0.32ರಷ್ಟಿದೆ. ವಾರದ ಪಾಸಿಟಿವಿಟಿ ದರ ಶೇ.0.23ರಷ್ಟಿದೆ ಎಂದು ಅಂಕಿಅಂಶ ತಿಳಿಸಿದೆ.