ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಯಲ್ಲಿ 91,702 ನೂತನ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, 3,403 ಕೋವಿಡ್ ಸೋಂಕಿತರು ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಜೂನ್ 11) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ತಾರೆಗಳ ತೋಟದಲ್ಲಿ..: ನಮ್ಮೊಳಗಿನ ಪಾಸಿಟಿವಿಟಿ ಹೆಚ್ಚಿಸುವ ಸಮಯ
ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 3,63,079ಕ್ಕೆ ಹೆಚ್ಚಳವಾಗಿದ್ದು, ಇದರಲ್ಲಿ 11,21,671 ಸಕ್ರಿಯ ಕೋವಿಡ್ ಪ್ರಕರಣಗಳಿವೆ ಎಂದು ವರದಿ ಹೇಳಿದೆ.
ಭಾರತದಲ್ಲಿ ಕಳೆದ ನಾಲ್ಕು ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಕೋವಿಡ್ ಪ್ರಕರಣ ವರದಿಯಾಗುತ್ತಿದೆ. ತಮಿಳುನಾಡು, ಕೇರಳ, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪ್ರಕರಣಗಳು ಇರುವ ಐದು ಪ್ರಮುಖ ರಾಜ್ಯಗಳಾಗಿದೆ.
ಈವರೆಗೆ ದೇಶದಲ್ಲಿ 24,60,85,649 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ತಮಿಳುನಾಡಿನಲ್ಲಿ 16,813, ಕೇರಳದಲ್ಲಿ 14,424, ಮಹಾರಾಷ್ಟ್ರದಲ್ಲಿ 12,207 ಮತ್ತು ಕರ್ನಾಟಕದಲ್ಲಿ 11,042 ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಸಿದ್ದು, ಜೂನ್ 14ರಿಂದ ಕೆಲವು ಜಿಲ್ಲೆಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಿರುವುದಾಗಿ ಘೋಷಿಸಿದೆ.