Advertisement

ಭಾರತದಲ್ಲಿ 9,216 ಕೋವಿಡ್ ಪ್ರಕರಣ ಪತ್ತೆ, 391 ಮಂದಿ ಸಾವು; ಸಕ್ರಿಯ ಪ್ರಕರಣ ಏರಿಕೆ

11:20 AM Dec 03, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 9,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 391 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,15,757ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ(ಡಿಸೆಂಬರ್ 03) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ಪರಿಷತ್ ಚುನಾವಣೆಯಲ್ಲಿ ಮತದಾರರಿಗೆ ಲಕ್ಷ ಲಕ್ಷ ರೂ ನೀಡಲಾಗುತ್ತಿದೆ: ಹೆಚ್.ವಿಶ್ವನಾಥ್ ಆರೋಪ

ಕೋವಿಡ್ 19 ಸೋಂಕಿನಿಂದ ದೇಶಾದ್ಯಂತ ಈವರೆಗೆ 4,70,115 ಮಂದಿ ಸಾವನ್ನಪ್ಪಿದ್ದಾರೆ. ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,976ಕ್ಕೆ ತಲುಪಿದೆ. ಇದು 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ.

ಕಳೆದ 24ಗಂಟೆಗಳಲ್ಲಿ 213 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ದೇಶದಲ್ಲಿ ಕೋವಿಡ್ ಚೇತರಿಕೆ ಪ್ರಮಾಣ ಶೇ.98.35ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ದರ 0.80ರಷ್ಟಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next