ನವದೆಹಲಿ: ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 9,419 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 159 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ(ಡಿಸೆಂಬರ್ 09) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ಇದನ್ನೂ ಓದಿ:ಎಂಐ-17ವಿ5 ದಾರಿ ತಪ್ಪಿದ ಶೂರ; ಈ ಹೆಲಿಕಾಪ್ಟರ್‌ನ ವಿಶೇಷತೆಗಳೇನು?
ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,66,241ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,74,111ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.
ಕಳೆದ 24ಗಂಟೆಗಳಲ್ಲಿ 1,009 ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಳವಾಗಿದೆ. ಒಂದೇ ದಿನದಲ್ಲಿ 8,251 ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರೊಂದಿಗೆ ಕೋವಿಡ್ ನಿಂದ 3,40,97,388 ಮಂದಿ ಗುಣಮುಖರಾಗಿದ್ದಾರೆ.
ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 94,742ಕ್ಕೆ ಹೆಚ್ಚಳವಾಗಿದೆ. 2020ರ ಮಾರ್ಚ್ ನಂತರದ ಕನಿಷ್ಠ ಪ್ರಮಾಣದ್ದಾಗಿದೆ. ದೇಶದಲ್ಲಿ ಕೋವಿಡ್ 19 ಚೇತರಿಕೆ ಪ್ರಮಾಣ ಶೇ.98.36ರಷ್ಟಿದೆ.