Advertisement

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

10:30 AM Dec 02, 2021 | Team Udayavani |

ನವದೆಹಲಿ:ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,765 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 477 ಮಂದಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ (ಡಿಸೆಂಬರ್ 02) ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಇದನ್ನೂ ಓದಿ:ನಿಲ್ಲದ ಅಮಾನತು ಗಲಾಟೆ; ರಾಜ್ಯಸಭೆಯಲ್ಲಿ ನಡೆಯದ ಕಲಾಪ

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,46,06,541ಕ್ಕೆ ಏರಿಕೆಯಾಗಿದ್ದು, ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ 4,69,724ಕ್ಕೆ ತಲುಪಿದೆ ಎಂದು ಅಂಕಿಅಂಶದಲ್ಲಿ ವಿವರಿಸಿದೆ.

ಭಾರತದಲ್ಲಿ 24ಗಂಟೆಗಳಲ್ಲಿ 8,548 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ. ಅಲ್ಲದೇ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 99,763ಕ್ಕೆ ಏರಿಕೆಯಾಗಿದೆ. 24ಗಂಟೆಗಳ ಅವಧಿಯಲ್ಲಿ 740 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ 98.35ರಷ್ಟಿದೆ. ಸತತ 158 ದಿನಗಳಿಂದ ಪ್ರತಿದಿನ ದೇಶದಲ್ಲಿ 50,000ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಕೋವಿಡ್ ಸೋಂಕು ಪ್ರಕರಣ ವರದಿಯಾಗುತ್ತಿದೆ ಎಂದು ಅಂಕಿಅಂಶದಲ್ಲಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next